ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಪ್ರತಿಭಟನೆ

0

ಧಾರವಾಡ ;- ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ರಾಜ್ಯ ಸರ್ಕಾರ ನಡೆ ಖಂಡಿಸಿ ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಷದ್, ಬಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಭಾರತ ಹಿಂದೂಗಳ ರಾಷ್ಟ್ರ. ಇಲ್ಲಿ ಹಿಂದೂಗಳ ಜೊತೆ ಅನ್ಯ ಧರ್ಮಿಯವರು ಇದ್ದಾರೆ. ಅವರ ಜೊತೆ ಹಿಂದೂಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಕೆಲವು ದುಷ್ಟ ಶಕ್ತಿಗಳು ಹಿಂದೂಗಳಿಗೆ ಆಸೆ ಆಮೇಶಗಳ ಮೂಲಕ ಮತಾಂತರ ಮಾಡುತ್ತಿದ್ದಾರೆ.

ಬಲವಂತ ಹಾಗೂ ಆಮೇಶಗಳ ಮೂಲಕ ನಡೆಯು ಮತಾಂತರವನ್ನು ನಾವು ಖಂಡಿಸುತ್ತೇವೆ. ಬಲವಂತದ ಮತಾಂತರ ತಡೆಯುವ ಕಾಯ್ದೆಯನ್ನು ಸರ್ಕಾರ ಹಿಂಪಡೆಯುತ್ತಿರುವುದು ಸರಿಯಲ್ಲ.

ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಒಂದು ವೇಳೆ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟಕ್ಕೆ ನಾವು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed