ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಹಿನ್ನೆಲೆ-ಬಿಹಾರದಲ್ಲಿ ಡಿ.14ಕ್ಕೆ ರಾಜ್ಯಸಭಾ ಉಪಚುನಾವಣೆಕಳೆದ ಅಕ್ಟೋಬರ್ 8 ರಂದು ನಿಧನರಾದ  ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಪ್ರತಿನಿಧಿಸುತ್ತಿದ್ದ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ.

ಚುನಾವಣಾ ಆಯೋಗ  ಇಂದು ಹೊರಡಿಸಿದ ಆದೇಶದ ಪ್ರಕಾರ ಬಿಹಾರದ ಒಂದು ರಾಜ್ಯಸಭಾ ಸದಸ್ಯ ಸ್ಥಾನದ ಉಪಚುನಾವಣೆಗೆ ನವೆಂಬರ್ 26 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.  ಡಿಸೆಂಬರ್ 14 ರಂದು ಒಂದು ಸ್ಥಾನದ ಬಿಹಾರ ರಾಜ್ಯದ ರಾಜ್ಯಸಭಾ ಚುನಾವಣೆಗೆ ಮತದಾನ ‌ನಡೆಯಲಿದೆ. ಅಂದು ಸಂಜೆಯೇ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಈ ಹಿಂದೆ 2014 ರಲ್ಲಿ ಬಿಜೆಪಿಯ ರವಿಶಂಕರ್ ಪ್ರಸಾದ್ ಅವರು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾರಣ ರಾಜ್ಯಸಭಾ ಸದಸ್ಯತ್ವದ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಮ್ ವಿಲಾಸ್ ಪಾಸ್ವಾನ್ ಅವರು ಆ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಆದರೆ ಈಗ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಕಾಲಿಕ ಮರಣದ ನಂತರ ತೆರವಾದ ರಾಜ್ಯಸಭಾ ಸದಸ್ಯತ್ವಕ್ಕಾಗಿಉಪಚುನಾವಣೆ ಡಿಸೆಂಬರ್ 14 ರಂದು ನಡೆಯಲಿದೆ.

2024 ಏಪ್ರಿಲ್ ವರೆಗೆ ದಿವಂಗತ ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜ್ಯಸಭಾ ಸದಸ್ಯತ್ವದ ಅಧಿಕಾರ ಇತ್ತು.

ಕೆ ಟಿವಿ ನ್ಯೂಸ್ ಪಾಟ್ನಾ

Add Comment