ದೆಹಲಿಯಲ್ಲಿ ಬಿ.ಎಲ್.ಸಂತೋಷ್-ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಮಾತುಕತೆ

ಕುಮಾರಸ್ವಾಮಿ ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಿಎಂ ಆಗಿದ್ದಾಗ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟರು ಎಂಬ ಕಾರಣಕ್ಕೆ ಬಿಜೆಪಿ ಸೇರಿ ಶಾಸಕ ಸ್ಥಾನ ತ್ಯಜಿಸಿದ್ದ ಗೋಕಾಕ್ ಮೂಲದ ರಮೇಶ್ ಜಾರಕಿಹೊಳಿ ಬಳಿಕ 16 ಶಾಸಕರನ್ನು ಒಟ್ಟುಗೂಡಿಸಿ ಪ್ರತಿಪಕ್ಷ ಬಿಜೆಪಿ ಸೇರಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಯಡಿಯೂರಪ್ಪ ಅವರು ಮತ್ತೊಮ್ಮೆ ಸಿಎಂ ಆಗಲು ಕಾರಣರಾಗಿದ್ದರು.

ಇಂತಹ ರೆಬೆಲ್ ಶಾಸಕರ ನಾಯಕ ರಮೇಶ್ ಜಾರಕಿಹೊಳಿ ಹಠ ಮಾಡಿ ತಮ್ಮ ವೈರಿ ಡಿ.ಕೆ.ಶಿವಕುಮಾರ್ ನಿರ್ವಹಿಸುತ್ತಿದ್ದ ಜಲಸಂಪನ್ಮೂಲ ಖಾತೆಯನ್ನೇ ಕೇಳಿ ಪಡೆದರು.

ಇಷ್ಟಾದರೂ ಸಚಿವ ರಮೇಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪ ಅವರನ್ನು ಸಂಪೂರ್ಣವಾಗಿ ನಂಬದೆ ದೆಹಲಿಯಲ್ಲಿ ಕಳೆದ 4 ದಿನಗಳಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆಗಾಗಿ ತಮ್ಮದೇ ಆದ ಗೇಮ್ ಪ್ಲಾನ್ ಮಾಡುತ್ತಿದ್ದಾರೆ.

ಅಂದಹಾಗೆ ಕೊಲ್ಕತ್ತಾ ಪ್ರವಾಸ ಮುಗಿಸಿ ವಾಪಸ್ ದೆಹಲಿಯ ಮನೆಗೆ ಬಂದ ಕರ್ನಾಟಕ ಮೂಲದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಕಂಡ ಸಚಿವ ರಮೇಶ್ ಜಾರಕಿಹೊಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಸಂಬಂಧ ಬಿ.ಎಲ್.ಸಂತೋಷ್ ಮತ್ತು ಸಚಿವ ರಮೇಶ್ ಜಾರಕೊಗೊಳಿ ಅವರುಗಳು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಬೆಂಬಲಿಗ ಸಚಿವ ಶ್ರೀಮಂತ ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ‌ಉಪಚುನಾವಣೆಯಲ್ಲಿ  ಬಿಜೆಪಿ ಟಿಕೆಟ್ ಕೊಟ್ಟರೂ ಶಾಸಕರಾಗಲು ವಿಫಲವಾಗಿ ಈಗ ಪರಿಷತ್

ಸದಸ್ಯರಾಗಿರುವ ಎಂ.ಟಿ.ಬಿ.ನಾಗರಾಜ್ ಮತ್ತು ಎಚ್. ವಿಶ್ವನಾಥ್ ಅವರನ್ನು ಸಚಿವರನ್ನಾಗಿಸಬೇಕೆಂದು ಬಿ.ಎಲ್.ಸಂತೋಷ್ ಅವರಿಗೆ ರಮೇಶ್ ಜಾರಕಿಹೊಳಿ ಅವರು ಪರಿಪರಿಯಾಗಿ ವಿನಂತಿಸಿಕೊಂಡರು.  ಆದರೆ ಬಿ.ಎಲ್. ಸಂತೋಷ್ ಮಾತ್ರ ಉಪಚುನಾವಣೆಯಲ್ಲಿ ಸೋತವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡಲು ಸಾಧ್ಯವೇ ಇಲ್ಲ, ಈ ಬಗ್ಗೆ ಕನಸು ಕಾಣಬೇಡಿ ಎಂದು ನಿಮ್ಮ ಮಿತ್ರರಿಗೆ ಹೇಳಿ ರಮೇಶ್, ಏಕೆಂದರೆ ನನ್ನ ಶಿಷ್ಯ ತುಳಸಿ ಮುನಿರಾಜುಗೌಡನಿಗೆ ಬೆಂಗಳೂರಿನ ರಾಜರಾಜೇಶ್ವರಿನಗರ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸಲು ನೀವು ಬಿಡಲಿಲ್ಲ, ಪರಿಣಾಮ ಈಗ ಮುನಿರತ್ನ ಅವರಿಗೆ ಸಚಿವ ಸ್ಥಾನವನ್ನು ಕೊಡಲೇಬೇಕಾದಂತಹ ಪರಿಸ್ಥಿತಿ ಇರುವಾಗ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸೋತರೂ ಈಗ ಎಂ.ಟಿ.ಬಿ.ನಾಗರಾಜ್ ಮತ್ತು ಎಚ್.ವಿಶ್ವನಾಥ್ ಅವರಿಗೆ ಪರಿಷತ್ ಸದಸ್ಯತ್ವ ನೀಡಿದ್ದೇ ಹೆಚ್ಚಾಯ್ತು ಎಂದು ಬಿ.ಎಲ್.ಸಂತೋಷ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬೈದು ಬೆಂಗಳೂರಿಗೆ ವಾಪಸ್ ಕಳುಹಿಸಿದ್ದಾರೆ.

ಕೆ ಟಿವಿ ನ್ಯೂಸ್ ನವದೆಹಲಿ

Add Comment