ಶ್ರೀಗುರುರಾಘವೇಂದ್ರ ಸಹಕಾರಿ ಬ್ಯಾಂಕ್ ಗೆ ನೂತನ ಆಡಳಿತಾಧಿಕಾರಿ ನೇಮಕ

ಬೆಂಗಳೂರಿನ ಶ್ರೀಗುರುರಾಘವೇಂದ್ರ ಸಹಕಾರಿ ಬ್ಯಾಂಕ್ ಮತ್ತು ಶ್ರೀಗುರು ಸಾರ್ವಭೌಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತಾಧಿಕಾರಿಯನ್ನಾಗಿ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಆರ್.ಅಶೋಕನ್ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ.

ಠೇವಣಿದಾರರ ಹಣದುರ್ಬಳಕೆ ಮತ್ತು ಬ್ಯಾಂಕ್ ನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಪಿಐಎಲ್ ಬಗ್ಗೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸಾಲವಸೂಲಾತಿ ಮತ್ತು ಬ್ಯಾಂಕ್ ನ ಪುನಶ್ಚೇತನಕ್ಕೆ ಸಂಬಂಧಿಸಿದಂತೆ 4 ವಾರಗಳ ಒಳಗೆ ವರದಿ ಸಲ್ಲಿಸುವಂತೆ ಬ್ಯಾಂಕ್ ನ ನೂತನ ಆಡಳಿತಾಧಿಕಾರಿಗೆ ಹೈಕೋರ್ಟ್ ಸೂಚಿಸಿದೆ.

                      ಕೆ ಟಿವಿ ನ್ಯೂಸ್ ಬೆಂಗಳೂರು

Add Comment