ಅಕ್ರಮ ಆಸ್ತಿ ಗಳಿಕೆ ಕೇಸ್-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಸಮನ್ಸ್

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ.

ಕಳೆದ ನವೆಂಬರ್ 19 ರಂದೇ ಬೆಂಗಳೂರಿನ ಡಿ.ಕೆ.ಶಿವಕುಮಾರ್ ಅವರ ಮನೆಗೆ ಬಂದು ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಲು ಆಗಮಿಸಿದ್ದರು.  ಆದರೆ ಅಂದು ಮನೆಯಲ್ಲಿ ಡಿ.ಕೆ.ಶಿವಕುಮಾರ್ ಇರಲಿಲ್ಲ. ಹಾಗಾಗಿ ಇಂದು ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ಮನೆಗೆ ಬಂದು ಸಮನ್ಸ್ ನೀಡಿದ್ದಾರೆ.  ನವೆಂಬರ್ 23 ರಂದು ಸಂಜೆ 4 ಗಂಟೆಗೆ ಸಿಬಿಐ ಕಚೇರಿಗೆ ಬಂದು ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಲು  ಸಿಬಿಐ ಸೂಚಿಸಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ “ನಾನು ನವೆಂಬರ್ 23 ರಂದು ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕೆಲಸಕ್ಕಾಗಿ ತೆರಳಬೇಕಿದೆ, ಆದಕಾರಣ ನಾನು ನವೆಂಬರ್ 25 ಕ್ಕೆ ಸಿಬಿಐ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುತ್ತೇನೆ” ಎಂದು ಸಿಬಿಐಗೆ ಮನವಿ ಮಾಡಿದ್ದಾರೆ.

ಹೀಗಾಗಿ ಕಳೆದ ಅಕ್ಟೋಬರ್ 5 ರಂದು ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಿರಿಯ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ‌ ದಾಖಲೆಗಳನ್ನು ಮತ್ತು ದಾಖಲೆಯಿಲ್ಲದ ಹಣವನ್ನು ವಶಪಡಿಸಿಕೊಂಡಿತ್ತು.

ಕೆ ಟಿವಿ ನ್ಯೂಸ್ ಬೆಂಗಳೂರು

 

 

 

Add Comment