ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ಧ-ಸತೀಶ್ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ನಾನು ಸ್ಪರ್ಧೆಗೆ ಸಿದ್ಧನಿದ್ದೇನೆ, ಆದರೆ ಕಾಂಗ್ರೆಸ್ ಪಕ್ಷದಿಂದ ಹಲವರು ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು “ಪಕ್ಷದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನಾನು ಸೇರಿದಂತೆ ಹಲವಾರು ಆಕಾಂಕ್ಷಿಗಳಿದ್ದೇವೆ, ಆದರೆ ಮಾಜಿ ಸಚಿವ ಹಾಗೂ ಮಾಜಿ ಬೆಳಗಾವಿ ಸಂಸದರೂ ಆಗಿರುವ ಪ್ರಕಾಶ್ ಹುಕ್ಕೇರಿ ಅವರು ಮಾತ್ರ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವುಳಿದಿದ್ದಾರೆ. ಯಾಕೆ ಅಂತ ಗೊತ್ತಿಲ್ಲ, ಆದರೆ ಪಕ್ಷ ಯಾರನ್ನು ಅಭ್ಯರ್ಥಿ ಮಾಡಿದರೂ ನಾನು ಪ್ರಚಾರ ಮಾಡಿ ಗೆಲುವು ಸಾಧಿಸಲು ಶ್ರಮಿಸುತ್ತೇನೆ” ಎಂದು ಹೇಳಿದರು.

ಕೆ ಟಿವಿ ನ್ಯೂಸ್ ಬೆಳಗಾವಿ

 

Add Comment