ನ.25,26 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 25 ರಂದು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.  ಆದರೆ ನವೆಂಬರ್ 26 ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಆದರೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆ ಟಿವಿ ನ್ಯೂಸ್ ಬೆಂಗಳೂರು

 

 

Add Comment