ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದ ಆತಂಕ

ತಮಿಳುನಾಡು, ಪುದುಚೆರಿಯಲ್ಲಿ ಇಂದಿನಿಂದ ನಿವಾರ್ ಚಂಡಮಾರುತದ ಅಬ್ಬರ ಹೆಚ್ಚಾಗಲಿದೆ. ಇಂದು ಸಂಜೆ ತಮಿಳುನಾಡಿನ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು ಇದರ ಪರಿಣಾಮ ತಮಿಳುನಾಡಿನ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಳಗ್ಗೆಯಿಂದಲೇ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಭೀಕರ ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುವ 24 ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Add Comment