ನನಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಇಚ್ಛೆ ಇದೆ-ಸಚಿವ ಸೋಮಶೇಖರ್

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಇಚ್ಛೆ ಇದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ. ಇಂದು ಬಿಜೆಪಿ ನಗರ ಮತ್ತು ಗ್ರಾಮಾಂತರ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೇಳಿಕೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಮಾತನ್ನು ತಮಾಷೆಗೆ ಹೇಳಿರುವೆ. ಹೆಚ್ಚು ಪ್ರಚಾರ ಮಾಡಬೇಡಿ. ಈಗಾಗಲೇ ಗೆದ್ದಿರುವ ನನ್ನ ಕ್ಷೇತ್ರದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ’ ಎಂದೂ ತಿಳಿಸಿದರು.

Add Comment