ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವಿಜ್ಞಾನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾಲೇಜು ಆರಂಭವಾಗುವುದಕ್ಕೂ ಮೊದಲೇ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮಾತ್ರ ಆತುರದಲ್ಲಿ ಜ.19ರಿಂದ ಎಲ್ಲ ವೈದ್ಯಕಿಯ ಪರೀಕ್ಷೆಗಳನ್ನು ನಡೆಸುವುದಾಗಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದು ವೈದ್ಯಕಿಯ ವಿದ್ಯಾರ್ಥಿಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದ್ದು, ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಮಂಗಳವಾರ ಮಂಡ್ಯ, ಮೈಸೂರು, ಗುಲ್ಬರ್ಗಾ, ಬೆಳಗಾವಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

 

Add Comment