ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ಸಿದ್ಥತೆ ನಡೆಸುವ ಸಲುವಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕರು ನ.30 ರಂದು ಸಭೆ ನಡೆಸಲಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಇತ್ತೀಚೆಗೆ ನಡೆದ ಎರಡು ವಿಧಾನಸಭೆ ಉಪಚುನಾವಣೆ, ನಾಲ್ಕು ವಿಧಾನಪರಿಷತ್ತಿನಲ್ಲಿ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲು ಕಂಡಿದ್ದು, ಮತ್ತೆ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಎದುರಾಗಲಿದೆ. ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆ ಮತ್ತು ಮುಂದಿನ ವರ್ಷ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಎದುರಾಗಲಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.