ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ/ಪುನಾರಚನೆ ಬಗ್ಗೆ ಹೈಕಮಾಂಡ್ ನಿರ್ಧಾರ-ಸಿಎಂ

ರಾಜ್ಯದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ನಿರ್ಧರಿಸಲಿದೆ‌ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ವೈ “ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದೆ, ಆದ್ದರಿಂದ ಈಗಾಗಲೇ ನಿಗಮಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಪ್ರಕ್ರಿಯೆ ನಡೆಯುತ್ತಿದೆ,ಆದ್ದರಿಂದ ಬಿಜೆಪಿ ಶಾಸಕರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು‌.
ಕೆ ಟಿವಿ ನ್ಯೂಸ್ ಮೈಸೂರು

Add Comment