ಅಕ್ರಮ ಆಸ್ತಿ ಗಳಿಕೆ ಕೇಸ್-ಸಿಬಿಐ ವಿಚಾರಣೆಗೆ ಹಾಜರಾಗಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆಗೆ ಹೊರಟ ಡಿ.ಕೆ.ಶಿ

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಅವರು ಬೆಂಗಳೂರಿನ ಗಂಗಾನಗರದ ಸಿಬಿಐ ಕಚೇರಿಗೆ ಇಂದು ಬೆಳಗ್ಗೆ ಆಗಮಿಸಿ ವಿಚಾರಣೆಗೆ ಹಾಜರಾದರು. ಸಂಜೆ 4 ಗಂಟೆ ವೇಳೆಯವರೆಗೆ ಸಿಬಿಐ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು ಇಂದು ಕೊರೊನಾ ಸೋಂಕಿನಿಂದ ನಿಧನರಾದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆಗೆ ತೆರಳಬೇಕೆಂದು ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡಿದರು. ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿ ವಿಚಾರಣೆ‌ ಇಂದು ಮುಗಿದಿದೆ,ನೀವಿನ್ನು ಹೊರಹೋಗಬಹುದೆಂದು ಗಂಗಾನಗರದ ಸಿಬಿಐ ಕಚೇರಿಯಿಂದ ಕಳುಹಿಸಿಕೊಟ್ಟರು.
ಬಳಿಕ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಪ್ರಯಾಣಿಸಿ ಗುಜರಾತ್ ರಾಜ್ಯದ ವಡೋದರಾ ನಗರದ ವಿಮಾನವೇರಿ ಅಹ್ಮದ್ ಪಟೇಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೊರಟರು.
ಬಳಿಕ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನ ವಿವಾಹ ಕಾರ್ಯಕ್ರಮಕ್ಕೆ ಗೋವಾಕ್ಕೆ ತೆರಳಿದ್ದಾರೆ. ಬಳಿಕವಷ್ಟೇ ಬೆಂಗಳೂರಿಗೆ ಡಿ.ಕೆ.ಶಿವಕುಮಾರ್ ವಾಪಾಸ್ಸಾಗಲಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment