ಬೆಂಗಳೂರಿನ ಲಕ್ಷ್ಮೀ ವಿಲಾಸ್ ಬ್ಯಾಂಕ್ ಡಿಬಿಎಸ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನ

ಷೇರುದಾರರ ತೀವ್ರ ವಿರೋಧದ ನಡುವೆಯೇ ಬೆಂಗಳೂರಿನ ಲಕ್ಷ್ಮೀ ವಿಲಾಸ್ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಲಹೆ ಮೇರೆಗೆ ಡಿಬಿಎಸ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ವಿಲೀನಗೊಳಿಸಿ ಕೇಂದ್ರಸರ್ಕಾರ ಆದೇಶ ಹೊರಡಿಸಿದೆ.
ಇಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 20 ಲಕ್ಷ ಹೂಡಿಕೆದಾರರು ಮತ್ತು 4 ಸಾವಿರ ಉದ್ಯೋಗಿಗಳನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿ‌ನ ಲಕ್ಷ್ಮೀ ವಿಲಾಸ್ ಬ್ಯಾಂಕನ್ನು ಡಿಬಿಎಸ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ ವಿಲೀನಗೊಳಿಸಲು ತೀರ್ಮಾನಿಸಲಾಯಿತು.
ಕೆ ಟಿವಿ ನ್ಯೂಸ್ ನವದೆಹಲಿ

Add Comment