ರಾಜ್ಯದಲ್ಲಿ ಬುಧವಾರ 1,630 ಕೊರೊನಾ ಸೋಂಕಿತರು ಪತ್ತೆ-19 ಮಂದಿ ಕೊರೊನಾಗೆ ಬಲಿ

ರಾಜ್ಯದಲ್ಲಿ ಬುಧವಾರ 1,630 ಕೊರೊನಾ ಸೋಂಕಿತರು ಹೊಸದಾಗಿ ಪತ್ತೆಯಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 8,78,055 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಬುಧವಾರ ಒಟ್ಟು 19 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ‌. ಒಟ್ಟಾರೆ ಈವರೆಗೆ ರಾಜ್ಯದಲ್ಲಿ 11,714 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಆದಾಗ್ಯೂ ರಾಜ್ಯದಲ್ಲಿ ಬುಧವಾರ 1,333 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ ರಾಜ್ಯದಲ್ಲಿ 8,41,432 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 24,890 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment