ಮನೀಷ್ ಪಾಂಡೆ ಕೈ ಹಿಡಿಯೋ ತುಳು ಹೀರೋಯಿನ್ ಯಾರು ಗೊತ್ತಾ ?

1 Star2 Stars3 Stars4 Stars5 Stars (No Ratings Yet)
Loading...

ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಡಿಸೆಂಬರ್ 2ರಂದು 30 ವರ್ಷದ ಮನೀಶ್, 26 ವರ್ಷದ ಆಶ್ರಿತಾ ಜೊತೆ ಮುಂಬೈನಲ್ಲಿ ಮದುವೆ ಆಗಲಿದ್ದಾರೆ.

2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.

ಮನೀಶ್ ಕರ್ನಾಟಕದ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಏಕದಿನ ಪಂದ್ಯದಲ್ಲಿ ಮನೀಶ್ ಮಿಡಿಲ್ ಆರ್ಡರ್ ನಲ್ಲಿ ಆಡುತ್ತಾರೆ. ಜೊತೆಗೆ ಮನೀಶ್ ಐಪಿಎಲ್ ಪಂದ್ಯಗಳಲ್ಲೂ ಮಿಂಚಿದ್ದಾರೆ. ಮನೀಶ್ ಈಗ ಕರ್ನಾಟಕ ಕ್ರಿಕೆಟ್ ತಂಡದ ನಾಯಕನಾಗಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲೂ ಆಡುತ್ತಿದ್ದಾರೆ.

ಮನೀಶ್ ಹಾಗೂ ಆಶ್ರಿತಾ ಮದುವೆಯಲ್ಲಿ ಕೇವಲ ಆತ್ಮೀಯ ಸ್ನೇಹಿತರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದು, ಎರಡು ದಿನಗಳ ಕಾಲ ಈ ಮದುವೆ ನಡೆಯಲಿದೆ. ಮನೀಶ್ ಮದುವೆಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಭಾಗವಹಿಸುವ ಸಾಧ್ಯತೆಯಿದೆ.

Add Comment