‘ಅಂಗವಿಕಲರಿಗೆ ಸಮಾನ ಅವಕಾಶ ಒದಗಿಸಬೇಕು- ನರೇಂದ್ರ ಮೋದಿ

ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ‘ಅಂಗವಿಕಲರಿಗೆ ಸಮಾನ ಅವಕಾಶ ಒದಗಿಸಬೇಕು ಹಾಗೂ ಅವರಿಗೆ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ. ‘ಅಂಗವಿಕಲರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು, ಅವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಭಾರತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.

ಕೆ.ಟಿವಿ ಕನ್ನಡ

Add Comment