ಹೊಸ ವರ್ಷಕ್ಕೆ ನೈಟ್ ಕರ್ಫ್ಯೂ ಇರಲ್ಲ – ಬಸವರಾಜ್ ಬೊಮ್ಮಾಯಿ

ಡಿ. ೫ರಂದು ಕರ್ನಾಟಕ ಬಂದ್ ನಡೆಸಲು ಅವಕಾಶವಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಡಿ.5 ಕರ್ನಾಟಕ ಬಂದ್ ನಡೆಸಲು ಅವಕಾಶವಿಲ್ಲ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ದಿನನಿತ್ಯದಂತೆ ನಡೆಯುತ್ತದೆ. ಬಂದ್ ಮಾಡಿದ್ರೆ ಸುಪ್ರೀಂ ಆದೇಶ ಉಲ್ಲಂಘನೆ ಆಗುತ್ತೆ. ಹೊಸ ವರ್ಷಾಚರಣೆ ಮತ್ತು ನೈಟ್ ಕರ್ಫ್ಯೂ ಕುರಿತು ಮಾತನಾಡಿದ ಅವರು, ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಸಭೆ ಕರೆದಿಲ್ಲ. ಆದರೆ ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ತಜ್ಞರು ಹೇಳಿದ್ದಾರೆ. ಇವತ್ತು ಅಥವಾ ನಾಳೆ ಸರ್ಕಾರ ಒಂದು ತೀರ್ಮಾನ ಮಾಡ್ತೇವೆ ಎಂದು ತಿಳಿಸಿದರು.

Add Comment