Asia Cup 2023: ಒಂದೇ ಗುಂಪಿನಲ್ಲಿ ಸ್ಪರ್ಧಿಸಲಿವೆ ಭಾರತ, ಪಾಕಿಸ್ತಾನ

0

ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳೆಂದೇ ಬಿಂಬಿತವಾಗಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಸೆಣಸಾಡಲು ವೇದಿಕೆ ಸಜ್ಜಾಗಿದೆ. 2023ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

2023ರ ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್‌ ತಿಂಗಳಿನಲ್ಲಿ ನಡೆಯಲಿದ್ದು, ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗ್ರೂಪ್‌ನಲ್ಲಿ ಸ್ಥಾನ ಪಡೆದಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತ, ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದ,

ಇದೇ ಗುಂಪಿನಲ್ಲಿ ಹಾಲಿ ಚಾಂಪಿಯನ್‌ ಶ್ರೀಲಂಕಾ ಮತ್ತು ಅರ್ಹತಾ ಸುತ್ತಿನಲ್ಲಿ ವಿಜೇತವಾದ ತಂಡವು ಈ ಗುಂಪಿನಲ್ಲಿ ಸ್ಥಾನ ಪಡೆಯಲಿದೆ. ಇನ್ನು ಮತ್ತೊಂದು ಗುಂಪಿನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ ಹಾಗೂ ಅರ್ಹತಾ ಸುತ್ತಿನಲ್ಲಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನು ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಏಷ್ಯಾಕಪ್ ಟೂರ್ನಿಯು ಏಕದಿನ ಕ್ರಿಕೆಟ್ ಮಾದರಿಯಲ್ಲಿ ಜರುಗಲಿದೆ.

2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ಜರುಗಲಿದ್ದು, ಇದರಲ್ಲಿ 6 ಲೀಗ್ ಪಂದ್ಯಗಳು, 6 ಸೂಪರ್ ಸಿಕ್ಸ್ ಪಂದ್ಯಗಳು ನಡೆಯಲಿದೆ. ಸೂಪರ್ 4 ಹಂತದಲ್ಲಿ 6 ಪಂದ್ಯಗಳು ನಡೆಯಲಿದ್ದು, ಸೂಪರ್ 4 ಹಂತದ ವೇಳೆಗೆ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ.

ಕಳೆದ ವರ್ಷ ಯುಎಇನಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು ಕಂಡು ಬಂದಿತ್ತು. ಲೀಗ್ ಹಂತದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ದ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಸೂಪರ್ 4 ಹಂತದಲ್ಲಿ ಭಾರತ ವಿರುದ್ದ ಪಾಕಿಸ್ತಾನ ವಿರುದ್ದ ಗೆಲುವಿನ ಕೇಕೆ ಹಾಕಿತು. ಪರಿಣಾಮ ಭಾರತ ಸೂಪರ್ 4 ಹಂತದಲ್ಲೇ ತನ್ನ ಅಭಿಯಾನವನ್ನು ಮುಗಿಸಿತ್ತು. ಇನ್ನು ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಲಂಕಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು

About Author

Leave a Reply

Your email address will not be published. Required fields are marked *

You may have missed