ವಿಧಾನಪರಿಷತ್ ಉಪಸಭಾಪತಿ ಎಸ್.ಆರ್.ಧರ್ಮೇಗೌಡ ಸಾವಿನ ಕೇಸನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ಒಪ್ಪಿಸಬೇಕು-ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಒತ್ತಾಯ

ಕರ್ನಾಟಕದ ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಆರ್.ಧರ್ಮೇಗೌಡ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಲೋಕಸಭೆಯ ಸ್ಫೀಕರ್ ಓಂ ಬಿರ್ಲಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಹೇಳಿಕೆ ನೀಡಿದ ಅವರು ಕರ್ನಾಟಕದ ವಿಧಾನಪರಿಷತ್ತಿನ ಉಪಸಭಾಪತಿ ಎಸ್
ಆರ್.ಧರ್ಮೇಗೌಡ ಅವರ ಸಾವಿಗೆ ನಾವು ಸಂತಾಪ ಸೂಚಿಸುತ್ತೇವೆ, ಆದರೆ ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಆರ್.ಧರ್ಮೇಗೌಡ ಅವರ ಸಾವಿನ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.
ಈ ಮೊದಲು ಕರ್ನಾಟಕದ ವಿಧಾನಪರಿಷತ್ತಿನಲ್ಲಿ ಉಪಸಭಾಪತಿ ಎಸ್.ಆರ್.ಧರ್ಮೇಗೌಡ ಅವರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಈ ಕೃತ್ಯವು ಪ್ರಜಾಪ್ರಭುತ್ವ ಮೇಲಿನ ದಾಳಿ ಎಂದು ತೀವ್ತವಾಗಿ ಖಂಡಿಸಿದ್ದರು.
ಕೆ ಟಿವಿ ನ್ಯೂಸ್ ನವದೆಹಲಿ

Add Comment