ಕ್ಯಾಂಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

0

ಬೆಂಗಳೂರು: ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಕ್ಯಾಂಟರ್ ಹರಿದು ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.19 ವರ್ಷದ ಸೋಹಿಲ್ ಬಿಸ್ವಾಸ್ ಮೃತ ಯುವಕ. ಕನಕಪುರ ರಸ್ತೆಯ ಯೂನಿಟೆಕ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ಪಶ್ಚಿಮ ಬಂಗಾಳ ಮೂಲದ ಸೋಹಿಲ್ ಕಾಂಕ್ರೀಟ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ. ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡಿದ್ದ ಸೋಹಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಹರ್ಯಾಣ ಮೂಲದ ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ.

About Author

Leave a Reply

Your email address will not be published. Required fields are marked *

You may have missed