ಮಗಳು ಹುಟ್ಟಿರುವುದು ನಿಜಕ್ಕೂ ನನ್ನ ಅದೃಷ್ಟ-ವಿರಾಟ್ ಕೊಹ್ಲಿ ಸಂತಸ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಇಂದು ಹೆಣ್ಣು ಮಗುವಿನ ಜನನವಾಗಿದೆ. ಇಂದು ಬೆಳಗ್ಗೆ ನೋವು ಕಾಣಿಸಿಕೊಂಡಿದ್ದರಿಂದ ಅನುಷ್ಕಾರನ್ನು ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆ ದಾಖಲಿಸಲಾಗಿತ್ತು. ದಾಖಲಾದ ಸ್ವಲ್ಪ ಸಮಯದ ಬಳಿಕ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ಈ ಕುರಿತು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದು, ಮಗಳು ಹುಟ್ಟಿರುವುದು ನಿಜಕ್ಕೂ ನನ್ನ ಅದೃಷ್ಟ ಎಂದು ಬರೆದುಕೊಂಡಿದ್ದಾರೆ.

Add Comment