ಬಿಎಸ್‍ವೈ-ಅನಂತ್ ಜೋಡಿ ಕಮಾಲ್- ಬೆಂಗಳೂರಿಗೆ ಮೋದಿ ಭರ್ಜರಿ ಗಿಫ್ಟ್

 

ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ವೇಗ ಸಿಗಲಿದೆ ಎನ್ನುವ ಸಿಎಂ ಯಡಿಯೂರಪ್ಪ ಮಾತು ಇದೀಗ ನಿಜವಾಗಿದೆ. ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಕನಸಿನ ಕೂಸಾದ ಬೆಂಗಳೂರು ಸಬ್ ಅರ್ಬನ್ ರೈಲ್ವೇ ಯೋಜನೆಗೆ ಕೊನೆಗೂ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯೋಜನೆ ಸಿದ್ದರಾಮಯ್ಯ ಅವಧಿಯಲ್ಲಿ ತೀವ್ರ ಕಡೆಗಣನೆಗೆ ಗುರಿಯಾಗಿತ್ತು. ಇದೀಗ ಬಿಜೆಪಿ ಸರ್ಕಾರ ಬಂದ ಮೇಲೆ, ಸಬ್ ಅರ್ಬನ್ ರೈಲು ಯೋಜನೆ ಜಾರಿಗೊಳಿಸಲು ತೀವ್ರ ಪ್ರಯತ್ನ ನಡೆದಿತ್ತು. ಹಲವು ಬಾರಿ ಯಡಿಯೂರಪ್ಪನವರೇ ಖುದ್ದು ಮನವಿ ಮಾಡಿದ್ದರು. ಇದೀಗ ಕೇಂದ್ರ ಬಜೆಟ್‍ನಲ್ಲಿ ಸಬ್ ಅರ್ಬನ್ ರೈಲು ಯೋಜನೆ ಘೋಷಣೆಯಾಗಿದೆ. ಕೇಂದ್ರ -ರಾಜ್ಯ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 18 ಸಾವಿರ ಕೋಟಿ ನೀಡುವುದಾಗಿ ಪ್ರಕಟಿಸಿದೆ. ರಾಜ್ಯವನ್ನು ಪ್ರತಿನಿಧಿಸ್ತಿರೋ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಬೆಂಗಳೂರಿನ ಸುದೀರ್ಘ ಕನಸೊಂದು ಈ ವರ್ಷ ಈಡೇರಲಿದೆ.
ಜೊತೆಗೆ ಚೆನ್ನೈ -ಬೆಂಗಳೂರು ಎಕ್ಸ್‍ಪ್ರೆಸ್ ಹೈವೇಯನ್ನು ಇದೇ ವರ್ಷ ಪೂರ್ಣಗೊಳಿಸುವುದಾಗಿ ನಿರ್ಮಲಾ ಪ್ರಕಟಸಿದ್ರು.

Add Comment