ಡ್ರಗ್ಸ್ ಕೇಸ್: ಬಂಧಿತೆ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಜ.19ಕ್ಕೆ ಮುಂದೂಡಿದ ಸು.ಕೋರ್ಟ್

ಡ್ರಗ್ಸ್ ಪ್ರಕರಣದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 3 ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿ 19 ಕ್ಕೆ ಮುಂದೂಡಿದೆ.
ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ಮುಕ್ತಿ ಸಿಗದೆ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತಷ್ಟು ದಿನಗಳ ಕಾಲ ಮುದ್ದೆ ಮುರಿಯಬೇಕಾಗಿದೆ.
ಕೆ ಟಿವಿ ನ್ಯೂಸ್ ನವದೆಹಲಿ

Add Comment