ಕೋಲಾರ: ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ ಸದಸ್ಯರಿಗಾಗಿ ಜನಸೇವಕ ಸಮಾವೇಶ

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯು ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಪಕ್ಷದ ಬೆಂಬಲಿತರಾಗಿ ಜಯಗಳಿಸಿದಂತಹ ಗ್ರಾಮ ಪಂಚಾಯತಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುವ ಸಲುವಾಗಿ ಬಂಗಾರಪೇಟೆ ನಗರದ ದೇಶಿಹಳ್ಳಿ ಸಮೀಪದ ಆರ್.ಆರ್.ಕನ್ವೆನ್ಷನ್ ಹಾಲ್ ನಲ್ಲಿ ಜನಸೇವಕ ಸಮಾವೇಶವನ್ನು ಏರ್ಪಡಿಸಿತ್ತು.
ಈ ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲುರವರು ‌ಹಾಗೂ ಕೋಲಾರ ಲೋಕಸಭಾ ಸದಸ್ಯರಾದ ಮುನಿಸ್ವಾಮಿಯವರು, ವಿಧಾನಪರಿಷತ್ತಿನ ಸದಸ್ಯರಾದ ಸದಾನಂದಗೌಡ,
ನಾರಾಯಣಸ್ವಾಮಿ ಹಾಗೂ ಜಿಲ್ಲಾಧ್ಯಕ್ಷರಾದ ಡಾ.ವೇಣುಗೋಪಾಲ್ ರವರು ಭಾಗವಹಿಸಿದ್ದರು.
ಸಮಾವೇಶದಲ್ಲಿ ಸಮಾಜಕಲ್ಯಾಣ ಸಚಿವರಾದ ಬಿ.ಶ್ರೀರಾಮುಲುರವರು ಮಾತನಾಡಿ ಸಮಾಜಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿನ ಬಡಕುಟುಂಬಗಳಿಗೆ ನಾನಾ ರೀತಿಯ ಸಾಲ ಸೌಲಭ್ಯಗಳನ್ನು ಮತ್ತು ವಿಶೇಷ ಕಾರ್ಯಕ್ರಮಗಳನ್ನು ಕೊಡಲಾಗುವುದು ಮತ್ತು ಇಲಾಖೆಯ ಒಟ್ಟಾರೆ ಅನುದಾನದಲ್ಲಿ ಶೇಕಡ 20ರಷ್ಟು ಅನುದಾನವನ್ನು ಕೋಲಾರ ಜಿಲ್ಲೆಗೆ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಕೋಲಾರ ಜಿಲ್ಲೆಯು ತೀರ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದಲ್ಲಿ ಜಿಲ್ಲೆಯ ಅತ್ಯಂತ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಬಹುದಾಗಿದ್ದು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಕೋಲಾರ ಜಿಲ್ಲೆಯನ್ನಾಗಿ ಮಾಡಬೇಕೆಂದು ಸಚಿವ ಬಿ.ಶ್ರೀರಾಮುಲುರವರು ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದರು.
ಜಿ.ಆರ್.ಆಕಾಶ್ KTV NEWS KOLAR

Add Comment