ನಾಳೆಯಿಂದ ದೇಶಾದ್ಯಂತ ಸ್ವದೇಶಿ ಕೊರೊನಾ ಲಸಿಕೆಗಳ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

ನಾಳೆ ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಗಳ ವಿತರಣೆ ಕಾರ್ಯ ಆರಂಭವಾಗಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ “ನಾಳೆ ಶನಿವಾರ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಅಧಿಕೃತವಾಗಿ ಬಳಕೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.‌
ರಾಜ್ಯದ 243 ಸ್ಥಳಗಳಲ್ಲಿ ಈ ಕೊರೊನಾ ಲಸಿಕೆಗಳನ್ನು ವಿತರಿಸಲಾಗುತ್ತಿದೆ.
ಬೆಂಗಳೂರಿನ 10 ಆಸ್ಪತ್ರೆಗಳಲ್ಲಿ ಈ ಲಸಿಕೆಗಳನ್ನು ವಿತರಿಸಲಾಗುತ್ತಿದೆ. ಸೇಂಟ್ ಜಾನ್ ಮೆಡಿಕಲ್ ಕಾಲೇಜು ಸೇರಿದಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲೂ ಸಹ ಲಸಿಕೆ ವಿತರಿಸಲಾಗುತ್ತಿದೆ.‌
ರಾಜ್ಯದ 237 ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.
ಬಳ್ಳಾರಿ,ಶಿವಮೊಗ್ಗ,ಹಾಸನ,ಚಿಕ್ಕಮಗಳೂರು,ಚಾಮರಾಜನಗರ,ದಾವಣಗೆರೆ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ‌. ಆದರೆ ಕೊರೊನಾ ಲಸಿಕೆಗಳನ್ನು ಜನಪ್ರತಿನಿಧಿಗಳ ಬದಲು ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಆರೋಗ್ಯ ಸಿಬ್ಬಂದಿಗಳು,ಪೌರಕಾರ್ಮಿಕರು,ಪೊಲೀಸರಿಗೆ ವಿತರಿಸಲಾಗುತ್ತದೆ. ಬಳಿಕ ವಿವಿಧ ರೋಗಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ.
ಒಟ್ಟು 7,17,439 ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಜನರಿಗೆ ಲಸಿಕೆ ನೀಡಲಾಗುತ್ತದೆ. ಒಟ್ಟು 8,14,500 ಲಸಿಕೆಯ ಡೋಸ್ ನೀಡಲಾಗುತ್ತದೆ.
ಈ ಕಾರ್ಯ ಒಂದು ವಾರದೊಳಗೆ ನಡೆಯಲಿದೆ.‌
ಮೊದಲ ಡೋಸ್ ನಂತರ 28 ದಿನಗಳ ಬಳಿಕ 2ನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ 10 ವಾಕ್ ಇನ್ ಕೂಲರ್, 4 ವಾಕ್ ಇನ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್,46,591 ಲಸಿಕೆ ಕ್ಯಾರಿಯರ್ ಹಾಗೂ 2,25,749 ಐಸ್ ಪ್ಯಾಕ್ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಸಚಿವರಾದ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.
ಕೆ ಟಿವಿ ನ್ಯೂಸ್ ಬೆಂಗಳೂರು .

Add Comment