ಸ್ಯಾಂಡಲ್ ವುಡ್ ಡ್ರಗ್ ಕೇಸ್-ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಪ್ಪದ ಬೆಡಗಿ ನಟಿ ರಾಗಿಣಿ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು, ಮತ್ತೆ ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ನಟಿ ರಾಗಿಣಿಗೆ ಮುಂದಿನ ಗುರುವಾರದವರೆಗೂ ಪರಪ್ಪನ ಅಗ್ರಹಾರವೇ ಗತಿ ಎನ್ನುವಂತಾಗಿದೆ.

 

Add Comment