ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

ಚುನಾವಣೆ ಮುಗಿದರೂ ದ್ವೇಷ ಮಾತ್ರ ಇನ್ನೂ ಮುಗಿದಿಲ್ಲ. ಎಸ್ ಬಿಜೆಪಿ ಕಾರ್ಯಕರ್ತನನ್ನು ಕೊಲೆಗೈದಿರುವ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿ ಎಂ ಎನ್ ಮೂರ್ತಿ(50) ಕೊಲೆಯಾದ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಎಂಬ ಕಾರಣಕ್ಕಾಗಿ ಇವನ ದೇಹಕ್ಕೆ ಕಲ್ಲನ್ನು ಕಟ್ಟಿ ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ ಎಂಬುದು ಪೋಷಕರ ಆರೋಪ. ಇನ್ನು ಸ್ಥಳಕ್ಕೆ ಹೊಳೆನರಸಿಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು ಕೊಲೆ ಮಾಡಿದ ಆರೋಪಿಗಳನ್ನು ಎಡೆಮುರಿ ಕಟ್ಟಲು ವಿಶೇಷ ತಂಡ ರಚನೆ ಮಾಡಿದ್ದಾರೆ.

ಎಸ್ಎಲ್ಎನ್ ಯೋಗೇಶ್ ಕೆಟಿವಿ ನ್ಯೂಸ್ ಹಾಸನ

ಕೆ.ಟಿವಿ ಕನ್ನಡ

Add Comment