ನಾನು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ-ಸಚಿವ ಜಗದೀಶ್ ಶೆಟ್ಟರ್

ನಾನು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ನಾನು ಸ್ಪರ್ಧಿಸುವುದೂ ಇಲ್ಲ,ನನ್ನ ಕೈಗಾರಿಕಾ ಖಾತೆ ಬದಲಾವಣೆ ಮಾಡುವ ಬಗ್ಗೆಯೂ ಗೊತ್ತಿಲ್ಲ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ “ನಾನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಯೂ ಅಲ್ಲ,ನನಗೆ ಸ್ಪರ್ಧಿಸಲು ಹೈಕಮಾಂಡ್ ಸೇರಿದಂತೆ ಯಾರೂ ಒತ್ತಾಯ ಮಾಡಿಲ್ಲ” ಎಂದು ನೇರವಾಗಿ ಕಡ್ಡಿಮುರಿದಂತೆ ಪ್ರತಿಕ್ರಿಯಿಸಿದರು.
ಇದೇ ವೇಳೆ ನನ್ನ ಖಾತೆ ಬದಲಾವಣೆ ಬಗ್ಗೆಯೂ ಗೊತ್ತಿಲ್ಲ,ಈಗ ಖಾತೆ ಬದಲಾವಣೆ ಬಗ್ಗೆ ಚರ್ಚೆ ಆಗಿದೆ ಎಂಬ ಬಗ್ಗೆಯೂ ನನಗೆ ಗೊತ್ತಿಲ್ಲ,ಆದರೆ ಸಚಿವರ ಖಾತೆ ಬದಲಾವಣೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ ಎಂದು ಅವರು ಹೇಳಿದರು.
ಜೊತೆಗೆ ಈಗ ಮಸ್ಕಿ,ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ,ಆದರೆ ಶೀಘ್ರವೇ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬಹುದು,ಆದರೆ ನಾನಂತೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಲ್ಲ,ಸ್ಪರ್ಧಿಸುವ ಆಸಕ್ತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆ ಟಿವಿ ಕನ್ನಡ ಬೆಂಗಳೂರು

Add Comment