ಕಾಲೇಜು ನಿರ್ಮಾಣ ಕಾಮಗಾರಿಗೆ ಅಡ್ಡಿ – ಅರಸೀಕೆರೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಅರಸೀಕೆರೆ ತಾಲೂಕು ಕಸಬಾ ಹೋಬಳಿಯ ಇಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಲವರು ಕಿಡಗೇಡಿಗಳು ಅಡ್ಡಿಪಡಿಸುವ ಮೂಲಕ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರತಿಭಟನೆಗೆ ಕರೆನೀಡಿದ್ದು ವ್ಯಾಪಕ ಬೆಂಬಲ ವ್ಯಕ್ತವಾಯಿತು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರೊಂದಿಗೆ ನಾನಾ ಜನಪರ ಸಂಘ ಸಂಸ್ಥೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರಲ್ಲದೇ ನಿಗದಿತ ಸ್ಥಳದಲ್ಲಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ವಾಗಬೇಕು ಎಂದು ಒತ್ತಾಯಿಸಿದರು. ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಹಾಸನ ಜಿಲ್ಲಾಧಿಕಾರಿಗಳಾದ ಸನ್ಮಾನ್ಯ ಶ್ರೀ ಗಿರೀಶ್ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಕೆ ಎಂ ಶಿವಲಿಂಗೇಗೌಡ ಮಾತನಾಡಿ ತಾಲ್ಲೂಕಿನ ಜನತೆಯ ದಶಕಗಳ ಕನಸು ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಿರುವ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ಕಾಮಗರಿಗೆ ಕೆಲವರು ಅಡ್ಡಿಪಡಿಸುವ ಮೂಲಕ ತೆರೆಮರೆಯಲ್ಲಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತಿ ಸದಸ್ಯರಾದ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿಳಿಚೌಡಯ್ಯ ಜೆಡಿಎಸ್ ಮುಖಂಡರು ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಬಂಡೀಗೌಡ ರಾಜಣ್ಣ ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಂ ಸಮೀವುಲ್ಲಾ.ತಾಪಂ ಮಾಜಿ ಸದಸ್ಯಗಂಗಾಧರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಜಯರಾಂ ಸೇರಿದಂತೆ ಜೆಡಿಎಸ್ ನಗರಸಭೆ ಸದಸ್ಯರು ಹಾಗೂ ನಾನಾ ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು
ಎಸ್ಎಲ್ಎನ್ ಯೋಗೀಶ್ ಕೆ.ಟಿವಿ ನ್ಯೂಸ್ ಅರಸೀಕೆರೆ

ಕೆ.ಟಿವಿ ನ್ಯೂಸ್, ಕನ್ನಡ

Add Comment