ರಾಜ್ಯದಲ್ಲಿ ಶುಕ್ರವಾರ ಕೇವಲ 324 ಕೊರೊನಾ ಕೇಸ್,ಕೊರೊನಾಗೆ 3 ಬಲಿ

ರಾಜ್ಯದಲ್ಲಿ ಶುಕ್ರವಾರ ಅತಿ ಕಡಿಮೆ ಅಂದರೆ 324 ಕೊರೊನಾ ಸೋಂಕಿತರು ಮಾತ್ರ ಪತ್ತೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 9,34,576 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ ಮೂವರು ಕೋರೊನಾ ಸೋಂಕಿತರು ಬಲಿಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,190 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 890 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,15,382 ಕೊರೊ‌ನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 6,985 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ ಐಸಿಯುನಲ್ಲಿ 165 ಕೊರೊನಾ ಸೋಂಕಿತರು ದಾಖಲಾಗಿದ್ದಾರೆ.
ಕೆ ಟಿವಿ ಕನ್ನಡ ಬೆಂಗಳೂರು

Add Comment