ಸಿರವಾರ: ಸಮರ್ಪಕ ನೀರಿಗಾಗಿ ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಸಮರ್ಪಕ ನೀರಿಗಾಗಿ ಹೆದ್ದಾರಿ ರಸ್ತೆ ತಡೆದು ರೈತರಿಂದ ಬೃಹತ್ ಪ್ರತಿಭಟನೆ ನಡೆಯಿತು.
ರೈತರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳಾದ
ಆರ್.ವೆಂಕಟೇಶ್ ಕುಮಾರ್ ‘ಸಿರವಾರ ಪಟ್ಟಣದ ಟಿ.ಎಲ್.ಬಿ.ಸಿ ಮೇಲ್ಭಾಗದಲ್ಲಿ ಅಕ್ರಮ ನೀರಿಗಾಗಿ ಕಡಿವಾಣ ಹಾಕಲು ಕಂದಾಯ ನೀರಾವರಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗುತ್ತಿದೆ. ಈಗಾಗಲೇ ಕೊಪ್ಪಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಅವರ ಸಹಕಾರದೊಂದಿಗೆ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಲ್ಲಿ ಯಾವುದೇ ಆತಂಕ ಬೇಡವೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಭರವಸೆ ನೀಡಿದರು.

ಶುಕ್ರವಾರ ಪಟ್ಟಣದ ನೀರಾವರಿ ಇಲಾಖೆಯ ಹತ್ತಿರ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಸ್ಥಳಕ್ಕೆ ಅವರು ಭೇಟಿ ನೀಡಿ ಮಾತನಾಡಿದರು. ಈ ಮೊದಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗಳು, ಶಾಸಕರು, ಸಂಸದರು ಹಾಗೂ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಗಳು ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಸಿ ಅಕ್ರಮ ನೀರಾವರಿ ಪಂಪ್ ಸೆಟ್ ಗಳ ತೆರವಿಗೆ ಆದೇಶಿಸಿದ್ದರು. ಆದ್ದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು.
ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಇಂದು ಕಡಿಮೆ ನೀರು ಸಂಗ್ರಹವಾಗಿತ್ತು. ಪ್ರಸ್ತುತ ಜಲಾಶಯದಿಂದ ತುಂಗಭದ್ರಾ ಎಡದಂಡೆ ಕಾಲುವೆಗೆ 3002 ನೀರು ಕ್ಯೂಸೆಕ್ ನೀರನ್ನು ಹರಿಸಲಾಗುತ್ತದೆ. ಅದರ ಪ್ರಕಾರ ಸಿರವಾರ ಕೊನೆಯ ಭಾಗದಲ್ಲಿ ಎಷ್ಟು ಪ್ರಮಾಣದಲ್ಲಿ ನೀರು ಇರಬೇಕಾದನ್ನು ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ನಾವು ನಿಭಾಯಿಸುತ್ತೇವೆ ಎಂದರು.
ನಿನ್ನೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ರಾಜ್ಯ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿದರು. ಆ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಯ ರೈತರ ನೀರಿನ ಸಮಸ್ಯೆಯ ಬಗ್ಗೆಯೂ ತಿಳಿಸಿದ್ದು ಶಾಶ್ವತ ಪರಿಹಾರಕ್ಕಾಗಿ ಸಿಎಂ ಅವರನ್ನು ಕೋರಿದ್ದೇನೆ. ಅವರು ಕೂಡ ಸಮ್ಮತಿಸಿದ್ದಾರೆ. ಇದೇ ಜನವರಿ 25ರಂದು ಕೊನೆ ಭಾಗದ ನೀರಾವರಿ ಸಮಸ್ಯೆ ಕುರಿತು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಕಂದಾಯ ನೀರಾವರಿ ಪೊಲೀಸ್ ಹಾಗೂ ಜಿಲ್ಲೆಯ ಶಾಸಕರು, ಸಂಸದರು, ಮಾಜಿ ಶಾಸಕರು ಮತ್ತು ರೈತರ ಸಂಘಟನೆಗಳ ಪ್ರಮುಖರ ಸಭೆಯನ್ನು ಕರೆದಿದ್ದಾರೆ
ಆ ಸಭೆಯಲ್ಲಿ ಜಿಲ್ಲೆಯ ಕೊನೆಯ ಭಾಗದ ರೈತರು ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಇಂದು ಮೈಲ್ 69ರಲ್ಲಿ 71 ನಿಗದಿತ ಪ್ರಮಾಣದಲ್ಲಿ ನೀರು ಹರಿಯುತ್ತದೆ. ಈ ನೀರಿನ ಪ್ರಮಾಣವನ್ನು ಕಾಯ್ದುಕೊಂಡು ಕೆಳಬಾಗಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಹಂಪಯ್ಯ ನಾಯಕ್, ಬಿಜೆಪಿಯ ಮುಖಂಡರಾದ ಶರಣಪ್ಪ ಗೌಡ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಚುಕ್ಕಿ ಸೂಗಪ್ಪ ಸಾಹುಕಾರ್ ಅವರುಗಳು ಮಾತನಾಡಿ ಒಂದು ದಿನ ಅಥವಾ ಎರಡು ದಿನಗಳವರೆಗೆ ನೀರು ಹರಿಸಿ ಮತ್ತೆ ನೀರು ಬಾರದಿದ್ದರೆ ಮತ್ತೆ ರೈತರೊಡನೆ ಉಗ್ರ ಹೋರಾಟಕ್ಕೆ ಮಾಡುವುದಾಗಿ ಎಚ್ಚರಿಸಿದರು.
ಸ್ಥಳದಲ್ಲಿ ಜಿಲ್ಲಾಧಿಕಾರಿಯ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಸಹಾಯಕ ಆಯುಕ್ತರಾದ ಸಂತೋಷ್ ಗೌಡ, ಸಿಂಧನೂರು ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಸಿರವಾರ ಪ್ರಭಾರಿ ತಹಸೀಲ್ದಾರ್ ಮಧುರಾಜ್ ಯಾಳಗಿ ಹಾಜರಿದ್ದರು.
ಸ್ಥಳದಲ್ಲಿ ಸಿಪಿಐ ದತ್ತಾತ್ರೇಯ ಕಾರ್ನಾಡ್, ಜಿ.ಚಂದ್ರಶೇಖರ್ ನಾಯಕ್, ಪಿಎಸ್ಐ ಸುಜಾತ ನಾಯಕ್ ವೆಂಕಟೇಶ್ ಅವರುಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ರಾಜು ಕಟ್ಟಿಮನಿ ಕೆ ಟಿವಿ ಕನ್ನಡ ಸಿರವಾರ

Add Comment