ಡಿ ಬಾಸ್ ಅಭಿಮಾನಿಗಳಿಗೆ ಬಿಗ್ ಗುಡ್ ನ್ಯೂಸ್. ಏನದು?

ರಾಜ್ಯ ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ದರ್ಶನ್ ನೇಮಕದ ಕುರಿತು ಇಂದು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರು ಜನವರಿ 25ರಂದು ಟ್ವೀಟ್ ಮೂಲಕ ತಿಳಿಸಿದ್ದರು. ಇನ್ನು ನಟ ದರ್ಶನ್ ಈ ಕಾರ್ಯಕ್ಕೆ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಲು ಒಪ್ಪಿಕೊಂಡಿದ್ದು, ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಚಾರ ಮತ್ತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಲ್ಲಿ ದರ್ಶನ್ ಭಾಗಿಯಾಗಲಿದ್ದಾರೆ.

Add Comment