ಯಶವಂತಪುರ: ಸೂಲಿಕೆರೆ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಬಿಜೆಪಿ ಮುಖಂಡ ವಿಜಿಕುಮಾರ್ ಶುಭಾಶಯ

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸೂಲಿಕೆರೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರಾದ ವಿಜಿಕುಮಾರ್ ನೂತನ ಸೂಲಿಕೆರೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಉಪಾಧ್ಯಕ್ಷೆ ಸೌಭಾಗ್ಯ ಎಸ್. ಉಮೇಶ್ ಅವರಿಗೆ ಶುಭಾಶಯ ಕೋರಿ ಮಾತನಾಡಿ “ಕಳೆದ 15 ವರ್ಷಗಳ ನಂತರ ಸೂಲಿಕೆರೆ ಗ್ರಾಮ ಪಂಚಾಯಿತಿ ಚುನಾವಣಾ ಇತಿಹಾಸದಲ್ಲಿ ಜೆಡಿಎಸ್ ಕೋಟೆಯನ್ನು ಛಿದ್ರಗೊಳಿಸಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಕಾರಣ ಯಶವಂತಪುರ ಕ್ಷೇತ್ರದ ಶಾಸಕರೂ ಆದ ಸಚಿವ ಎಸ್.ಟಿ.ಸೋಮಶೇಖರ್ ಅವರ ನಾಯಕತ್ವ ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಪಕ್ಷ ಸಂಘಟನೆ. ಸೂಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಲ್ಲಾ ಜಾತಿ-ಧರ್ಮಗಳ ಜನರಿಗೂ ಆಸ್ಪತ್ರೆ, ಸಮುದಾಯ ಭವನ ಮತ್ತು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡಲು ನಮ್ಮ ಸೂಲಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಉಪಾಧ್ಯಕ್ಷೆಯರಾದ ಸೌಭಾಗ್ಯ ಎಸ್. ಉಮೇಶ್ ಅವರುಗಳು ಶ್ರಮಿಸಿ ಕೆಲಸ ಮಾಡಿಕೊಡುತ್ತಾರೆ ಎಂದು ಸ್ಥಳೀಯ ಗ್ರಾಮಗಳ ಜನತೆಗೆ ಭರವಸೆ ನೀಡಿದ ವಿಜಿಕುಮಾರ್ ಅವರು ಇದೇ ಫೆಬ್ರವರಿ 27ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹೇಳಿದರು.
ಇದೇ ವೇಳೆ ಸೂಲಿಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೌಭಾಗ್ಯ ಅವರ ಪತಿ ಎಸ್.ಉಮೇಶ್ ಅವರು ಮಾತನಾಡಿ ” ಕಳೆದ 15 ವರ್ಷಗಳ ಸೂಲಿಕೆರೆ ಗ್ರಾಮ ಪಂಚಾಯಿತಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಹಿಡಿದಿದೆ. ಇದಕ್ಕೆ ಕಾರಣ ಯಶವಂತಪುರ ಕ್ಷೇತ್ರದ ಶಾಸಕರೂ ಆದ ಸಚಿವ ಎಸ್.ಟಿ.ಸೋಮಶೇಖರ್ ಅವರ ಅಭಿವೃದ್ಧಿ ಕಾರ್ಯ ಮತ್ತು ಜನಪರ ಯೋಜನೆಗಳು. ಮುಂದೆ ಈ ಸೂಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಡಜನರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಸಹ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಬಿ.ಸೌಮ್ಯ KTVKANNADA ಯಶವಂತಪುರ

Add Comment