ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ

0

ಹುಬ್ಬಳ್ಳಿ : ರಾಷ್ಟ್ರೀಯ ಯುವಜನೋತ್ಸವದ ಹಿನ್ನೆಲೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 3.20 ನಿಮಿಷಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ನವ ವಧುವಿನಂತೆ ಗೋಕುಲ ರಸ್ತೆ ಸಿಂಗಾರಗೊಂಡಿದೆ. ನಗರದ ಎತ್ತ ನೋಡಿದ್ರು ಕೆಸರಿಮಯವಾಗಿದೆ.

 

About Author

Leave a Reply

Your email address will not be published. Required fields are marked *

You may have missed