ಸಂಘರ್ಷ ನಡೆಯದಂತೆ ಮೀಸಲಾತಿ ನೀಡಬೇಕು – ಎಚ್.ಡಿ ಕುಮಾರಸ್ವಾಮಿ ಹೇಳಿಕೆ

ಸಮಾಜದ ಸಂಘರ್ಷಕ್ಕೆ ಎಡೆ ಮಾಡಿಕೊಡದಂತೆ ಚಿಂತನೆ ನಡೆಸಿ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿ ಅವರೇ ನಿಭಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೂಲಭೂತ ಸೌಕರ್ಯಗಳನ್ನು ಪಡೆಯದೆ ಇರುವಂತಹ ಸಮುದಾಯಕ್ಕೆ ಮೀಸಲಾತಿ ಕೊಡುವುದು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢ ವನ್ನಾಗಿ ಮಾಡುವಂತಹ ಕಾರ್ಯ. ಆದರೆ ಮಠಾಧೀಶರು ರಸ್ತೆಗಿಳಿದು ಪ್ರತಿಭಟನೆ ಮಾಡುವಂತಹ ಪರಿಸ್ಥಿತಿಗೆ ತಂದುಕೊಂಡಿದ್ದು ತಪ್ಪು ಎನ್ನುವುದು ನನ್ನ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. ಅವರ ಸಮಾಜಕ್ಕೆ ಸ್ಥಾನಮಾನ ಕಲ್ಪಿಸಿಕೊಡುವಲ್ಲಿ ವಿಫಲರಾಗಿದ್ದಾರೆ. ಈಗ ಮೀಸಲಾತಿಗಾಗಿ ಹೋರಾಟ ಮಾಡುತ್ತೇನೆ ಎನ್ನುವುದು ಎಷ್ಟು ಸರಿ ಎನ್ನುವುದನ್ನು ಅವರೇ ಚಿಂತನೆ ಮಾಡಬೇಕು ಎಂದರು.
ಎಸ್ಎಲ್ಎನ್ ಯೋಗೇಶ್ ಕೆ ಟಿವಿ ನ್ಯೂಸ್ ಹಾಸನ
ಕೆ.ಟಿವಿ ನ್ಯೂಸ್ ಕನ್ನಡ

Add Comment