ಬೇಡ ಜಂಗಮರ ಬಗ್ಗೆ ಅವಹೇಳನಾಕಾರಿ ಹೇಳಿಕೆ-ವಚನಾನಂದ ಸ್ವಾಮೀಜಿ‌ ವಿರುದ್ಧ ಅಥಣಿಯಲ್ಲಿ ಪ್ರತಿಭಟನೆ

ಬೇಡ ಜಂಗಮರ ಬಗ್ಗೆ ಹಗುರವಾಗಿ ಮಾತನಾಡಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಚನಾನಂದ ಸ್ವಾಮೀಜಿ ವಿರುದ್ದ ಬೇಡ ಜಂಗಮ ಸಮಾಜದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ 2A ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟದ ಸಮಯದಲ್ಲಿ ವಚನಾನಂದ ಸ್ವಾಮೀಜಿ ಬೇಡ ಜಂಗಮರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ತೀವ್ರವಾಗಿ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪ್ರತಿಭಟನಾಕಾರರು ವಚನಾನಂದ ಸ್ವಾಮೀಜಿ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅಥಣಿ ಪಟ್ಟಣದ ಡಿ.ಬಿ.ಪವಾರದೇಸಾಯಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೂಡಲೇ
ವಚನಾನಂದ ಸ್ವಾಮೀಜಿಯವರು ಕ್ಷಮೆಯಾಚಿಸುವಂತೆ ಆಗ್ರಹಿಸಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮತ್ತು ಡಿ.ವೈ.ಎಸ್ಪಿ ಎಸ್.ವಿ.ಗಿರೀಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿಲಾಸ್
KTVKANNADA
ಅಥಣಿ

Add Comment