ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಟಪ ಉಪಾಧ್ಯಕ್ಷರಾಗಿ ಬಿಜೆಪಿಯ ಚೌಡಪ್ಪ ಆಯ್ಕೆ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಟಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಚೌಡಪ್ಪ ಅವರು ಕೆಟಿವಿಕನ್ನಡ ನ್ಯೂಸ್ ಚಾನೆಲ್ ನೊಂದಿಗೆ ಮಾತನಾಡಿದ್ದಾರೆ.
ಮಂಟಪ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಲು ಮತ ನೀಡಿ ಆಶೀರ್ವದಿಸಿದ ಎಲ್ಲಾ ಮತಬಾಂಧವರಿಗೂ
ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಈಗ ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಜಾತಾ ಮುನಿರಾಜು ಮತ್ತು ನನ್ನನ್ನು ಉಪಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ಎಲ್ಲಾ ಮಂಟಪ ಗ್ರಾಮ ಪಂಚಾಯಿತಿ ಸದಸ್ಯರಿಗೂ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆದರೆ ನಾವು ಮಂಟಪ ಗ್ರಾಮ ಪಂಚಾಯಿತಿಯ ಎಲ್ಲಾ 36 ಗ್ರಾಮ ಪಂಚಾಯಿತಿ ಸದಸ್ಯರಿಗೂ ಸಮಪ್ರಮಾಣದಲ್ಲಿ ಗ್ರಾಮ ಪಂಚಾಯಿತಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಮಂಟಪ ಗ್ರಾಮ ಪಂಚಾಯಿತಿಯ ಎಲ್ಲಾ 11 ವಾರ್ಡ್ ಗಳಿಗೂ ಭೇಟಿ ನೀಡಿ ಅಲ್ಲಿನ ವಿದ್ಯುತ್ ಸಮಸ್ಯೆ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಪಿಡಿಓಗೆ ಹೇಳಿ ಮನವಿಗಳನ್ನು ಸ್ವೀಕರಿಸಿ ಅವನ್ನು ಪರಿಹರಿಸಲು ಪಿಡಿಓಗೆ ಹೇಳಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲೂ ಕಸದ ರಾಶಿ ವಿಲೇವಾರಿ ಮಾಡುವ ಸಮಸ್ಯೆ ಬಗ್ಗೆ ನಾವು ಈಗಾಗಲೇ ಪಿಡಿಓ ಜೊತೆ ಸಭೆ ಮಾಡಿ ಚರ್ಚಿಸಿದ್ದೇವೆ‌. ಈ ಸಭೆಯಲ್ಲಿ ಕಸದ ರಾಶಿ ಹಾಕಲು ಬೇರೊಂದು ಜಾಗವನ್ನು ಗುರುತಿಸಿ ಜನರ ಕಸದ ಸಮಸ್ಯೆ ನಿವಾರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಫೆಬ್ರವರಿ 27 ರ ಹುಟ್ಟುಹಬ್ಬಕ್ಕೆ ಮಂಟಪ ಗ್ರಾಮ ಪಂಚಾಯಿತಿ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ಹೇಳುತ್ತಿದ್ದೇನೆ, ದೇವರು ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಯುಷ್ಯ, ಆರೋಗ್ಯ ನೀಡಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನಪ್ರಿಯ ಬಿಜೆಪಿ ಶಾಸಕರೂ ಆದ ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಎಂ.ಕೃಷ್ಣಪ್ಪ ಅವರೇ ನನ್ನ ಈ ಮಂಟಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹುದ್ದೆಯ ಅಧಿಕಾರಕ್ಕೆ ಕಾರಣರಾಗಿದ್ದಾರೆ,ಅವರಿಗೂ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮಂಟಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಚೌಡಪ್ಪ ಧನ್ಯವಾದಗಳನ್ನು ಸಲ್ಲಿಸಿದರು.
ಬಿ.ಸೌಮ್ಯ KTVKANNADA ಮಂಟಪ

Add Comment