ಸಚಿವ ಕೆ.ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ಸಚಿವ ಡಾ. ಕೆ.ಸುಧಾಕರ್ ಅವರೇನು ದೇವಲೋಕದಿಂದ ಇಳಿದುಬಂದಿದ್ದಾರೆಯೇ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ, ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಅವರು ಮಾತನಾಡಿದ್ದು, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಹೊನ್ನಾಳಿ ಕ್ಷೇತ್ರದ ಕೆಲಸಕ್ಕಾಗಿ ನಾನು ಸಚಿವ ಸುಧಾಕರ್ ಅವರಿಗೆ ಹಲವು ಬಾರಿ ಕರೆ ಮಾಡಿದೆ. ಆದರೆ ಅವರು ಫೋನ್ ಸ್ವೀಕರಿಸುತ್ತಿಲ್ಲ. ನಮ್ಮ ಬೇಡಿಕೆಗಳಿಗೂ ಸಹ ಅವರು ಸ್ಪಂದಿಸುತ್ತಿಲ್ಲ. ಇದರಿಂದ ನಮಗೆ ಬಹಳಷ್ಟು ಬೇಸರವಾಗಿದೆ. ಅಲ್ಲದೇ, ಅವರ ಆಪ್ತ ಕಾರ್ಯದರ್ಶಿಗೂ ಸಹ ಕರೆ ಮಾಡಿ ಹೇಳಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುಧಾಕರ್ ಒಬ್ಬರಿಂದಲೇ ಸರ್ಕಾರ ರಚನೆಯಾಗಿದೆಯೇ? ಅವರೇನು ದೇವಲೋಕದಿಂದ ಇಳಿದು ಬಂದಿದ್ದಾರಾ? ಇಂತಹ ವರ್ತನೆ ಮುಂದುವರೆದರೆ ರೇಣುಕಾಚಾರ್ಯನ ಇನ್ನೊಂದು ಮುಖ ತೋರಿಸಬೇಕಾಗುತ್ತೆ ಎಂದು ಹೇಳುವಂತೆ ತಿಳಿಸಿದ್ದೇನೆ ಎಂದು ಹೇಳಿದರು.

Add Comment