ಕರ್ನಾಟಕದಲ್ಲಿ ಬಿಜೆಪಿ ಗೆ ಲೈಫ್ ಕೊಟ್ಟಿದ್ದು ನಾನೇ-ಹೆಚ್.ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಬಿಜೆಪಿ ಗೆ ಲೈಫ್ ಕೊಟ್ಟಿದ್ದು ನಾನೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಇಂದು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ. 2006ರಲ್ಲಿ ಬಿಜೆಪಿಯವರೆಲ್ಲ ಮಂಗನ ತರ ಇನ್ನೊಂದು ಪಕ್ಷಕ್ಕೆ ಹಾರಲು ರೆಡಿಯಾಗಿದ್ದರು. ಇದೇ ಯಡಿಯೂರಪ್ಪ ಅರ್ಜಿ ಹಾಕಿಕೊಂಡು ನನ್ನ ಹತ್ತಿರ ಬಂದಿದ್ದರು. ನನ್ನನ್ನು ಮಂತ್ರಿ ಮಾಡಿ. ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ ಎಂದು ಅಂಗಲಾಚಿದ್ದರು ಎಂದು ದೂರಿದರು.

Add Comment