ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 79ನೇ ಜನ್ಮದಿನದ ಸಂಭ್ರಮ-ಪ್ರಧಾನಿ ಮೋದಿ,ಸಚಿವರು ಸೇರಿದಂತೆ ಬಿಜೆಪಿ ಜನಪ್ರತಿನಿಧಿಗಳು,ಮುಖಂಡರಿಂದ ಶುಭ ಹಾರೈಕೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 79ನೇ ಹುಟ್ಟುಹಬ್ಬದ ಸಂಭ್ರಮದ ದಿನ.
ಆದ್ದರಿಂದ ಸಿಎಂ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಸಿಎಂ ಬಿ.ಎಸ್.ವೈ.ಗೆ ಬರ್ತ್ ಡೇ ಶುಭಾಶಯ ಹೇಳಿದ್ದಾರೆ.
ಇದೇ ವೇಳೆ ಮುಂಜಾನೆ ಬೆಂಗಳೂರಿನ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಸಿಎಂ ಯಡಿಯೂರಪ್ಪ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಅರ್ಚನೆ ಮೂಲಕ ಪೂಜೆ ಸಲ್ಲಿಸಿದರು.
ಬಳಿಕ ಸಿಎಂ ನಿವಾಸ ಕಾವೇರಿಗೆ ವಾಪಸ್ ಬಂದಾಗ ಸಿಎಂ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳಲು ಬಿಜೆಪಿ ನಾಯಕರು,ಸಚಿವರು,ಶಾಸಕರು,ಮುಖಂಡರು,ಕಾರ್ಯಕರ್ತರು ಬಂದಿದ್ದರು.
ಇದೇ ವೇಳೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ಅಬಕಾರಿ ಸಚಿವ ಕೆ.ಗೋಪಾಲಯ್ಯ,ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ, ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್,ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು,ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ,ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್,ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ಸೇರಿದಂತೆ ನಾಡಿ‌ನ ಬಹುತೇಕ ಬಿಜೆಪಿ ಸಚಿವರು,ಶಾಸಕರು,ನಿಗಮ ಮಂಡಳಿಗಳ ಅಧ್ಯಕ್ಷರು,ಬಿಜೆಪಿ ಮುಖಂಡರು,ಆಯಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಅಸಂಖ್ಯಾತ ಬಿಜೆಪಿ‌ ಕಾರ್ಯಕರ್ತರು,ಅಭಿಮಾನಿಗಳು,ಬೆಂಬಲಿಗರು ಸಿಎಂ ಯಡಿಯೂರಪ್ಪ ಅವರ 79ನೇ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
KTVKANNADA ಬೆಂಗಳೂರು

Add Comment