ಬೆಳಗಾವಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್ ನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಣಕ್ಕಿಳಿಸಲು ಒತ್ತಾಯ

ರಾಜ್ಯದಲ್ಲಿ ಮಸ್ಕಿ,ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿವೆ.
ಏತನ್ಮಧ್ಯೆ ಬೆಳಗಾವಿ ಲೋಕಸಭೆಯ ಉಪಚುನಾವಣೆಗೆ ಕೆಪಿಸಿಸಿ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಕಳುಹಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಹಾಗೂ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ ಹಟ್ಟಿಹೋಳಿ ಅವರ ಹೆಸರುಗಳನ್ನು ಕೆಪಿಸಿಸಿ ಹೈಕಮಾಂಡ್ ಗೆ ಕಳುಹಿಸಿದೆ.‌ ಆದರೆ ಈ ಪಟ್ಟಿಯಲ್ಲಿ ಇರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಬೆಳಗಾವಿ ಲೋಕಸಭೆಯ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಭಾರಿ ಒತ್ತಡ ಪಕ್ಷದೊಳಗಿನಿಂದಲೇ ಬರುತ್ತಿದೆ. ಆದರೆ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಸೂಕ್ತವಾದ ಆಯ್ಕೆ ಎಂದು ಕೆಪಿಸಿಸಿ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದೆ. ಬದಲಾದ ರಾಜಕೀಯದಲ್ಲಿ ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಿತ್ತೂರು ರಾಣಿ ಚೆನ್ನಮ್ಮನ ವಂಶಸ್ಥರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ ಲಿಂಗಾಯತ,ದಲಿತ-ಹಿಂದುಳಿದ-ಅಲ್ಪಸಂಖ್ಯಾತ ಜೊತೆಗೆ ಮರಾಠ ಸಮುದಾಯದ ಮತಗಳನ್ನು ಬಾಚಿಕೊಂಡು ನಿರಾಯಸವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಎಐಸಿಸಿ ಕಚೇರಿಯಲ್ಲೂ ನಡೆಯುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಲಿದೆ.
ಆದಾಗ್ಯೂ ಈಗ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಕೆಪಿಸಿಸಿ ಸಂಭಾವ್ಯ ಅಭ್ಯರ್ಥಿಗಳನ್ನು ಹುಡುಕಲು ಆರಂಭಿಸಿದೆ.
KTVKANNADA ಬೆಳಗಾವಿ ಮತ್ತು ನವದೆಹಲಿ

Add Comment