ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತೇನೆ-ಡಿಕೆಶಿ

ನಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದೇ ತರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಮುಳಬಾಗಿಲಿನ ಕುರುಡುಮಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1999ರಲ್ಲಿ ಎಸ್.ಎಂ ಕೃಷ್ಣ ಕುರುಡುಮಲೆಯಿಂದ ಯಾತ್ರೆ ಶುರು ಮಾಡಿದ್ದರು. ಪಾಂಚಜನ್ಯ ಯಾತ್ರೆ ಆರಂಭಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದರು. ಅದ್ರಂತೆ, ನಾನು ಕೂಡ ಈಗ ಅದೇ ರೀತಿ ಪಾಂಚಜನ್ಯ ಮೊಳಗಿಸಲಿದ್ದೇನೆ. ಮುಂದೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದರು.

Add Comment