ಪೆಟ್ರೋಲ್ ಬಾಂಬ್ ಸ್ಪೋಟ-ನಟ ರಿಷಬ್ ಶೆಟ್ಟಿಗೆ ಗಾಯ

ಸಿನಿಮಾ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಪೋಟಗೊಂಡಿರುವ ಪರಿಣಾಮ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗಾಯಗೊಂಡಿದ್ದಾರೆ. ಏಕಾಏಕಿ ಸೆಟ್ ನಲ್ಲಿ ಬಾಂಬ್ ಸ್ಪೋಟಗೊಂಡಿದ್ದರಿಂದ ರಿಷಬ್ ಶೆಟ್ಟಿಯ ಬೆನ್ನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಈ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದ್ದು, ರಿಷಬ್ ಶೆಟ್ಟಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Add Comment