ಬಿಗ್ ಬಾಸ್ ನಲ್ಲಿ ಚಾನ್ಸ್ ಸಿಕ್ಕಿದ್ರೆ ಹೋಗ್ತೇನೆ-ಹೆಚ್.ವಿಶ್ವನಾಥ್

ಅವಕಾಶ ಸಿಕ್ಕರೆ ಖಂಡಿತವಾಗಿ ನಾನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ನಾನು ಬಿಗ್ ಬಾಸ್ ಮನೆಗೆ ಹೋಗಲು ಆಸೆಪಟ್ಟಿದ್ದೇನೆ. ನನ್ನ ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಬಿಗ್ ಬಾಸ್ ಮನೆಗೆ ಹೋಗಲು ಒತ್ತಾಯಿಸುತ್ತಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರಿಂದ ವಿಶೇಷ ಆಹ್ವಾನಿತರಾಗಿ ಆಹ್ವಾನ ಬಂದರೆ ನಾಲ್ಕೈದು ದಿನಗಳ ಮಟ್ಟಿಗೆ ಬಿಗ್ ಬಾಸ್ ಮನೆಗೆ ಸ್ಪೆಷಲ್ ಗೆಸ್ಟ್ ರೀತಿ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

Add Comment