ಸೆಕ್ಸ್ ಸಿಡಿ ದೂರು ವಾಪಸ್ ಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ-ಸುಮೊಟೊ‌ ಕೇಸ್ ದಾಖಲಿಸಿ ತನಿಖೆಗೆ ಕಬ್ಬನ್ ಪಾರ್ಕ್ ಪೊಲೀಸರ ನಿರ್ಧಾರ!

ಉತ್ತರಕರ್ನಾಟಕದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಕೆಪಿಟಿಸಿಎಲ್ ನಿಗಮದಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ಬೆಂಗಳೂದಿನ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ನಿನ್ನೆ ದಿಢೀರನೆ ಉಲ್ಟಾ ಹೊಡೆದಿದ್ದಾರೆ.
ತಾವು ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ರಿಲೀಸ್ ಮಾಡಲು 5 ಕೋಟಿ ರೂ. ಡೀಲ್ ಕುದುರಿಸಿದ್ದೇನೆ ಎಂಬಂರ್ಥದಲ್ಲಿ ನೇರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿರುವುದರಿಂದ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆಯಾಗಿದೆ. ಹೀಗೆ ಮಹಿಳೆಯರ ಪರ ಸಾಮಾಜಿಕ ಹೋರಾಟ ಮಾಡುತ್ತಿರುವ ನನ್ನನ್ನೇ ಈ ಪ್ರಕರಣದಲ್ಲಿ ತಪ್ಪಿತಸ್ಥನನ್ನಾಗಿ ಮಾಡಿ ಆರೋಪಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದಿಂದ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆಯಾಗಿರುವ ಕಾರಣ ಹಿನ್ನಡೆಯಾಗಿರುವ ಕಾರಣ ನಾನು ರಮೇಶ್ ಜಾರಕಿಹೊಳಿ ವಿರುದ್ಧ ನೀಡಿರುವ ಸೆಕ್ಸ್ ಸಿಡಿ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದೇನೆ ಎಂದು ಕಬ್ಬನ್ ಪಾರ್ಕ್ ಠಾಣೆಗೆ ಪತ್ರ ಬರೆದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.
ಇಷ್ಟಾದರೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸೆಕ್ಸ್ ಸಿಡಿ ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ‌.‌
ಜೊತೆಗೆ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರ ದೂರನ್ನು ರದ್ದುಗೊಳಿಸಲೂ ಸಹ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನಿರ್ಧರಿಸಿಲ್ಲ ಎನ್ನಲಾಗಿದೆ.
ಇದರಿಂದ ಸೆಕ್ಸ್ ಸಿಡಿ ಕೇಸ್ ಯಾವ ದಿಕ್ಕಿಗೆ ಸಾಗಲಿದೆ ಎಂಬುದು ಇಂದು ನಿರ್ಧಾರವಾಗಲಿದೆ.
KTKANNADA ಬೆಂಗಳೂರು

Add Comment