ಸಿಂಧಗಿ ಉಪಚುನಾವಣೆಗೆ ಬಿಜೆಪಿಯ 8 ಚುನಾವಣಾ ಉಸ್ತುವಾರಿಗಳ ನೇಮಕ

ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಬಿಜೆಪಿ ಘಟಕ 8 ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ, ಜಿಲ್ಲಾ ಉಸ್ತುವಾರಿ ಸಚಿವೆಯಾದ ಶಶಿಕಲಾ ಜೊಲ್ಲೆ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ, ಸಚಿವ ಸಿ.ಸಿ.ಪಾಟೀಲ್, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ ಹಾಗೂ ವಿಭಾಗದ ಬಿಜೆಪಿ ಪ್ರಭಾರಿ ಚಂದ್ರಶೇಖರ ಕವಟಗಿ ಅವರನ್ನು ಸಿಂಧಗಿ ಉಪಚುನಾವಣೆಯ ಪಕ್ಷದ ಉಸ್ತುವಾರಿಗಳನ್ನಾಗಿ ನೇಮಿಸಿ ರಾಜ್ಯ ಬಿಜೆಪಿ ಘಟಕ ಆದೇಶ ಹೊರಡಿಸಿದೆ.
KTVKANNADA ಬೆಂಗಳೂರು

Add Comment