ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ-ಸಿಎಂ ಯಡಿಯೂರಪ್ಪ

ಸದ್ಯಕ್ಕೆ ರಮೇಶ್ ಜಾರಕಿಹೊಳಿ ಅಥವಾ ಅವರ ಸಹೋದರ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ
ಸೆಕ್ಸ್‌ ಸಿಡಿ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮ್ಮ ದೂರನ್ನು ವಾಪಸ್ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಜಲಸಂಪನ್ಮೂಲ ಸಚಿವ ಸ್ಥಾನವನ್ನು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡಿ ಜಾರಕಿಹೊಳಿ ಕುಟುಂಬಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಎಂದು ರಮೇಶ್ ಜಾರಕಿಹೊಳಿ ಅವರ ಪರ ಬಿಜೆಪಿಯ 15 ಶಾಸಕರು ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಒತ್ತಾಯಿಸಿದ್ದಾರೆ.‌
ಆಗ ಸಿಎಂ ಯಡಿಯೂರಪ್ಪ ಮಾತನಾಡಿ “ರಮೇಶ್ ಜಾರಕಿಹೊಳಿ ಅವರಿಗಾಗಲಿ ಅಥವಾ ಬಾಲಚಂದ್ರ ಜಾರಕಿಹೊಳಿ ಅವರಿಗಾಗಲಿ ಈಗ ಸಚಿವ ಸ್ಥಾನ ಕೊಡಲು ನನಗೆ ಅಧಿಕಾರವಿಲ್ಲ, ಆದರೆ ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಒಂದು ವೇಳೆ ನಾನು ಮತ್ತೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸಚಿವ ಸ್ಥಾನ ಕೊಟ್ಟರೆ ಆಗ ಪ್ರತಿಪಕ್ಷಗಳಿಗೆ ಆಹಾರವಾಗುತ್ತದೆ. ಆದರೆ ಮುಂದೆ ಅಧಿವೇಶನ ಮುಗಿದ ನಂತರ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬಳಿಕ ರಮೇಶ್ ಜಾರಕಿಹೊಳಿ ಅಥವಾ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು 15ಕ್ಕೂ ಹೆಚ್ಚು ಬಿಜೆಪಿಯ ರಮೇಶ್ ಜಾರಕಿಹೊಳಿ ಬೆಂಬಲಿಗ ಬಿಜೆಪಿ ಶಾಸಕರಿಗೆ ಶಾಕ್ ನೀಡಿದ್ದಾರೆ.
KTVKANNADA
ಬೆಂಗಳೂರು

Add Comment