ದಾದಾ ಸಾಹೇಬ್ ಪ್ರಶಸ್ತಿಗೆ ಭಾಜನರಾದ ಸೂಪರ್ ಸ್ಟಾರ್ ತಲೈವಾ

ನಟ ರಜನಿಕಾಂತ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಪ್ರಶಸ್ತಿ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಇಂತಹ ಅತ್ಯುನ್ನತ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ಜಾವ್ಡೇಕರ್, ೨೦೧೯ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ರಜನಿಕಾಂತ್ ಅವರ ಹೆಸರನ್ನು ಘೋಷಿಸಲು ಸಂತೋಷವಾಗುತ್ತಿದೆ. ಜೂರಿ ತಂಡಕ್ಕೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇನ್ನು ರಜನಿಕಾಂತ್ ಅವರಿಗೆ ಮೇ ೩ ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ವರದಿಯಾಗಿದೆ.

 

Add Comment