ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು!

ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ ೨೭ರಂದು ಕೊರೋನಾ ಸೋಂಕು ದೃಢಪಟ್ಟಿದ್ದು, ಅಂದಿನಿಂದ ಕ್ವಾರಂಟೈನ್ ನಲ್ಲಿದ್ದರು. ಆದ್ರೆ ಇಂದು ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

 

Add Comment